ಹುಬ್ಬಳ್ಳಿ: ಈರುಳ್ಳಿ ದರ ಕುಸಿತ ಖಂಡಿಸಿ ಬೆಳೆಗಾರರು ಇಲ್ಲಿನ ಅಮರಗೋಳದ ಎಪಿಎಂಸಿ ದ್ವಾರದ ಎದುರು ಬುಧವಾರ ಪ್ರತಿಭಟನೆ ನಡೆಸಿ, ಎಪಿಎಂಸಿ ಆಡಳಿತ ಕಚೇರಿಗೆ ಮುತ್ತಿಗೆ ಹಾಕಿದರು.
ಹುಬ್ಬಳ್ಳಿ –ಧಾರವಾಡ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ತಡೆದು, ರಸ್ತೆಯಲ್ಲಿ ಈರುಳ್ಳಿ ಸುರಿದು ಪ್ರತಿಭಟಿಸಿದರು. ಇದರಿಂದಾಗಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿದ್ದರಿಂದ ವಾಹನ ಸವಾರರು ಪರದಾಡಿದರು.
ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿ ವಿವಿಧ ಜಿಲ್ಲೆಗಳಿಂದ ಎಂಟು ಸಾವಿರ ಕ್ವಿಂಟಲ್ ಈರುಳ್ಳಿ ಆವಕವಾಗಿತ್ತು. ಪ್ರತಿ ಕ್ವಿಂಟಲ್ಗೆ ಕನಿಷ್ಠ ₹100 ರಿಂದ ಗರಿಷ್ಠ ₹1,500 ಟೆಂಡರ್ನಲ್ಲಿ ದರ ನಿಗದಿಯಾಗಿತ್ತು. ವ್ಯಾಪಾರಿಗಳು ತೇವಾಂಶದ ನೆಪವೊಡ್ಡಿ ಕಡಿಮೆ ದರ ನಿಗದಿಪಡಿಸಿದ್ದಾರೆ ಎಂದು ರೈತ ಮುಖಂಡರು ದೂರಿದರು.
ರತ್ನಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ, ಎಪಿಎಂಸಿಯಲ್ಲಿ ದಲ್ಲಾಳಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದ್ದು, ಪ್ರತಿ ಕ್ವಿಂಟಲ್ಗೆ ಕನಿಷ್ಠ ₹2 ಸಾವಿರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
ವಿರುಪಾಕ್ಷ ಗಣಿ, ಶಂಕ್ರಪ್ಪ ಕುಂದಗೋಳ, ರಾಜಶೇಖರ ಪಾಟೀಲ, ಸುನೀಲ ಯಲಿಗಾರ, ಲಕ್ಷ್ಮಣಗೌಡ ಶಿವನಗೌಡರ, ಜಡೆಪ್ಪ ಮಡಿವಾಳರ, ಮಂಜುನಾಥ ಮರಿಗೌಡ್ರ, ಪುಂಡಲಿಕ ಮಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.