ADVERTISEMENT

ಚುನಾವಣೆ ನಿಲ್ಲಿಸಲು ಆಗ್ರಹ: ಏಕಾಏಕಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 4:08 IST
Last Updated 13 ಏಪ್ರಿಲ್ 2022, 4:08 IST
ಅಣ್ಣಿಗೇರಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ದಲಿತಪರ ವಿವಿಧ ಸಂಘಟನೆಗಳು ಮಂಗಳವಾರ ರಾತ್ರಿ ಪ್ರತಿಭಟನೆ ಆರಂಭಿಸಿದವು
ಅಣ್ಣಿಗೇರಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ದಲಿತಪರ ವಿವಿಧ ಸಂಘಟನೆಗಳು ಮಂಗಳವಾರ ರಾತ್ರಿ ಪ್ರತಿಭಟನೆ ಆರಂಭಿಸಿದವು   

ಅಣ್ಣಿಗೇರಿ: ಪಟ್ಟಣದಲ್ಲಿ ಬುಧವಾರ ನಡೆಯಲಿರುವ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆಯನ್ನು ತಡೆಯುವಂತೆ ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳು ಮಂಗಳವಾರ ರಾತ್ರಿ ಏಕಾಏಕಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದವು.

ಚುನಾವಣಾ ಆಯೋಗ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಬ ವರ್ಗದ ಮಹಿಳೆಗೆ ಮೀಸಲಾತಿ ಪ್ರಕಟಿಸಿ ಚುನಾವಣಾ ದಿನಾಂಕ ನಿಗದಿಪಡಿಸಿದೆ. ದಿನಾಂಕ ಪ್ರಕಟವಾಗುತ್ತಿದ್ದಂತಯೇ ಸಂಘಟನೆಗಳು ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದವು. ಈ ಕುರಿತು ನ್ಯಾಯಾಲಯದ ಮೊರೆ ಕೂಡ ಹೋಗಿವೆ.

ಪ.ಜಾ ಮಹಿಳೆಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲಿಸುವದಿಲ್ಲ. ಈಗಾಗಲೇ ಮೀಸಲಾತಿ ಬದಲಾವಣೆ ಮಾಡುವಂತೆ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖಂಡ ಮಂಜುನಾಥ ಹೊನ್ನನ್ನವರ ಹೇಳಿದರು. ಸಂಘಟನೆಯ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.