ADVERTISEMENT

ಪುತ್ತೂರು ಪ್ರಕರಣ: ಎನ್‌ಎಸ್‌ಯುಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 14:48 IST
Last Updated 6 ಜುಲೈ 2019, 14:48 IST
ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಕಿಮ್ಸ್‌ ಆವರಣದ ಹೊರಗೆ ಶನಿವಾರ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು –ಪ್ರಜಾವಾಣಿ ಚಿತ್ರ
ಪುತ್ತೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಕಿಮ್ಸ್‌ ಆವರಣದ ಹೊರಗೆ ಶನಿವಾರ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿತು –ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಪುತ್ತೂರಿನಲ್ಲಿ ಹಿಂದೂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಎಬಿವಿಪಿ ಕಾರ್ಯಕರ್ತರೆನ್ನಲಾದವರ ಮೇಲೆ ಕಠಿಣ ಕ್ರಮ ಕೈಗಳ್ಳಬೇಕು ಎಂದು ಆಗ್ರಹಿಸಿ ನ್ಯಾಷನಲ್‌ ಸ್ಟೂಡೆಂಟ್‌ ಆಫ್ ಇಂಡಿಯಾ (ಎನ್‌ಎಸ್‌ಯುಐ) ಶನಿವಾರ ನಗರದ ಕಿಮ್ಸ್‌ ಆವರಣದ ಹೊರಗೆ ಪ್ರತಿಭಟನೆ ನಡೆಸಿತು.

ಸುಶಿಕ್ಷಿತರ ಜಿಲ್ಲೆ ಎನ್ನುವ ಖ್ಯಾತಿಗೆ ಒಳಗಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದು ವಿಪರ್ಯಾಸ. ಸಂಸ್ಕಾರ, ಸಂಸ್ಕೃತಿ ಎನ್ನುವವರೇ ಇಂತಹ ಹೀನ ಕೃತ್ಯದಲ್ಲಿ ಭಾಗಿಯಾಗುತ್ತಿರುವುದು ದುರಂತ. ಈ ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

‘ಹಿಂದೂ ಮಕ್ಕಳನ್ನು ಮುಟ್ಟಿದರೆ ಕೈ ಕತ್ತರಿಸಿ ಎಂದು ಹೇಳುತ್ತಿದ್ದ ಸಂಸದ ಅನಂತಕುಮಾರ ಹೆಗಡೆ ಎಲ್ಲಿದ್ದೀಯಪ್ಪಾ?’, ‘ಧಿಕ್ಕಾರ ಧಿಕ್ಕಾರ ಬಿಜೆಪಿಗೆ ಧಿಕ್ಕಾರ’ ಎನ್ನುವ ಬರಹವಿರುವ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪ್ರದೀಪ ಹಡಗಲಿ, ರಾಜೇಶ ಚೌಹಾಣ್‌, ಶ್ರದ್ಧಾ, ಚಿನ್ಮಯ ನಾಯಕ, ರೋಹಿತ್‌ ಘೋಡಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.