
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಇಲ್ಲಿನ ಅಕ್ಕಿಹೊಂಡದ ತಂಬದ ಓಣಿ ನಿವಾಸಿ ವಿರೂಪಾಕ್ಷಗೌಡ ಪಾಟೀಲ ಅವರು 44ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2024ರ 80 ವರ್ಷ ಮೇಲ್ಪಟ್ಟವರ 800 ಮೀಟರ್ ಹಾಗೂ 1,500 ಮೀಟರ್ ಓಟದಲ್ಲಿ ತಲಾ ಒಂದು ಬೆಳ್ಳಿ ಪದಕ ಜಯಿಸಿದ್ದಾರೆ.
ಈ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಫೆಬ್ರುವರಿ 13ರಿಂದ 17ರವರೆಗೆ ಪುಣೆಯಲ್ಲಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಡೆದಿತ್ತು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.