
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮಂಗಳವಾರ ಹುಬ್ಬಳ್ಳಿಗೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಅವರಿಗೆ ಸ್ವಾಗತ ಕೋರುವ ಬ್ಯಾನರ್, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ಮುಖ್ಯವಾಗಿ ಗೋಕುಲ ರಸ್ತೆಯ ಉದ್ದಕ್ಕೂ ಕಣ್ಣಿಗೆ ರಾಚುತ್ತಿವೆ.
ರಾಹುಲ್ ಗಾಂಧಿ ಅವರು ದೆಹಲಿ ವಿಮಾನ ನಿಲ್ದಾಣದಿಂದ ಸಂಜೆ 5ಕ್ಕೆ ವಿಶೇಷ ವಿಮಾನದಲ್ಲಿ ಹೊರಟು ಸಂಜೆ 7.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ.
ವಿಮಾನ ನಿಲ್ದಾಣದ ಬಳಿಯಿರುವ ಫಾರ್ಚೂನ್ ಹೋಟೆಲ್‌ನಲ್ಲಿ ರಾತ್ರಿ 8 ಗಂಟೆಗೆ ನಡೆಯಲಿರುವ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸಭೆಯ ನೇತೃತ್ವ ವಹಿಸಲಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.