ADVERTISEMENT

ರೈಲ್ವೆ ಇಲಾಖೆ | ಸುರಕ್ಷಿತ ಕಾರ್ಯನಿರ್ವಹಣೆಗೆ ಒತ್ತು: ಮುಕುಲ್‌ ಸರನ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 4:47 IST
Last Updated 6 ಜುಲೈ 2025, 4:47 IST
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗೀಯ ಕಚೇರಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್‌ ಸರನ್ ಮಾಥೂರ್‌ ಮಾತನಾಡಿದರು
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗೀಯ ಕಚೇರಿಯಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್‌ ಸರನ್ ಮಾಥೂರ್‌ ಮಾತನಾಡಿದರು   

ಹುಬ್ಬಳ್ಳಿ: ‘ರೈಲ್ವೆ ಇಲಾಖೆಯು ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಅಳವಡಿಸಿ, ಶೀಘ್ರ ಹಾಗೂ ಸುರಕ್ಷಿತ ಕಾರ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದೆ’ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್‌ ಸರನ್ ಮಾಥೂರ್‌ ಹೇಳಿದರು. 

ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ಕಚೇರಿಯಲ್ಲಿ ಶನಿವಾರ ನಡೆದ ನವೀಕೃತ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರದ (ಡಿಜಿಟಲ್‌ ಸಿ.ಸಿ ಕ್ಯಾಮೆರಾ ಕಣ್ಗಾವಲು ಪ್ಯಾನಲ್) ಉದ್ಘಾಟನೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಆದಾಯ ಹೆಚ್ಚಿಸುವ ಜತೆಗೆ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

ವಿಭಾಗೀಯ ರೈಲ್ವೆ ವ್ಯವಸ್ಥಾ‍ಪಕಿ ಬೇಲಾ ಮೀನಾ ಮಾತನಾಡಿ, ‘ಇಲಾಖೆಯ ದಕ್ಷ ಕಾರ್ಯ ನಿರ್ವಹಣೆಯಲ್ಲಿ ಅಧಿಕಾರಿಗಳ ಪಾತ್ರ ಮಹತ್ವದಾಗಿದೆ. ಉನ್ನತಮಟ್ಟದ ಕಾರ್ಯಕ್ಷಮತೆ ಕಾಯ್ದುಕೊಳ್ಳಬೇಕು’ ಎಂದು ಕೋರಿದರು.

ಸಭೆಯಲ್ಲಿ ವಿವಿಧ ವಿಭಾಗಗಳ ಅಧಿಕಾರಿಗಳು ಪ್ರಗತಿ ವರದಿ ಮಂಡಿಸಿದರು. ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಟಿ.ಬಿ.ಭೂಷಣ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಇದ್ದರು.

‘ಎಐ ಆಧಾರಿತ ಸಿ.ಸಿ ಟಿ.ವಿ ಕ್ಯಾಮೆರಾ’
ವಿಭಾಗೀಯ ರೈಲ್ವೆ ಸುರಕ್ಷತಾ ಪಡೆಯ (ಆರ್‌ಪಿಎಫ್‌) ನಿರ್ವಹಣೆ ಮತ್ತು ನಿಯಂತ್ರಣ ಕೇಂದ್ರದಲ್ಲಿ ಅಳವಡಿಸಲಾದ ಸಿ.ಸಿ ಟಿ.ವಿ ಕಮಾಂಡ್‌ ಕಂಟ್ರೋಲ್ (ಡಿಜಿಟಲ್‌ ಸಿ.ಸಿ ಟಿ.ವಿ ಕ್ಯಾಮೆರಾ ಕಣ್ಗಾವಲು ಪ್ಯಾನಲ್ ) ಆತ್ಯಾಧುನಿಕ ವ್ಯವಸ್ಥೆಯಾಗಿದೆ. ಇದು ವಿಭಾಗೀಯ ರೈಲ್ವೆ ವ್ಯಾಪ್ತಿಯಲ್ಲಿನ 79 ರೈಲು ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳ ಕಣ್ಗಾವಲು ಮಾಡುತ್ತದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಒಳಗೊಂಡ 943 ಸಿಸಿ ಟಿ.ವಿ ಕ್ಯಾಮೆರಾಗಳು ಅಲ್ಲಿನ ದೃಶ್ಯಗಳನ್ನು ಸೆರೆಹಿಡಿಯುತ್ತವೆ.  ಈ ಪ್ಯಾನಲ್‌ಗಳನ್ನು ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಯೋಜನೆಯಲ್ಲಿ ಅಳವಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.