
ಧಾರವಾಡ: ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಹೆಚ್ಚಿಸಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಎಸ್‍ಯುಸಿಐ) ಜಿಲ್ಲಾ ಸಮಿತಿಯವರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ರೈಲು ನಿಲ್ದಾಣದ ಎದುರು ಸಮಾವೇಶಗೊಂಡ ಪ್ರತಿಭಟನಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈಲು ನಿಲ್ದಾಣ ಅಧಿಕಾರಿಯ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಎಸ್‍ಯುಸಿಐ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಜಡಗನ್ನವರ ಮಾತನಾಡಿ, ‘ಕೇಂದ್ರ ಸರ್ಕಾರವು ಸಿಬ್ಬಂದಿ ವೆಚ್ಚದ ಆರ್ಥಿಕ ಹೊರೆಯನ್ನು ಪೂರೈಸುವ ಕುಂಟು ನೆಪವೊಡ್ಡಿ, ರೈಲು ಪ್ರಯಾಣದರವನ್ನು ಹೆಚ್ಚಿಸಿದೆ. ಇದನ್ನು ಕೂಡಲೇ ಕೈಬಿಡಬೇಕು’ ಎಂದು ಒತ್ತಾಯಿಸಿದರು.
'ಅಸ್ತಿತ್ವದಲ್ಲಿರುವ ಪ್ರಯಾಣ ವೆಚ್ಚವನ್ನು ಕಡಿಮೆ ಮಾಡಬೇಕು. ಪ್ರಯಾಣಿಕರ ಸುರಕ್ಷತೆ, ಸಮಯಪಾಲನೆಗೆ ಆದತ್ಯ ನೀಡಬೇಕು. ಅಗತ್ಯ ಸೌಲಭ್ಯಗಳನ್ನು ಹೆಚ್ಚಿಸಿ ರೈಲು ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.
ಎಸ್‍ಯುಸಿಐ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ್ ಬಡಿಗೇರ, ತಾಯಿದಾಸ್ ಎಂ.ಬಿ, ದೀಪಾ ಧಾರವಾಡ, ಶರಣು ಗೋನವರ, ಮಧುಲತಾ ಗೌಡರ್, ಭವಾನಿ ಶಂಕರ್ ಗೌಡರ, ಗಂಗಾ ಕೊಕರೇ, ದೇವಮ್ಮ, ಶಶಿಕಲಾ, ಸಿಂಧು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.