
ಹುಬ್ಬಳ್ಳಿ/ದಾಂಡೇಲಿ: ‘ರೈಲ್ವೆ ಇಲಾಖೆಯ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೂ ಬರೆಯಲು ಅವಕಾಶ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.
‘ಪ್ರಾದೇಶಿಕ ಭಾಷೆಗಳಿಗೆ ಯೋಗ್ಯ ಸ್ಥಾನಮಾನ ಮತ್ತು ಗೌರವ ಒದಗಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ನೇಮಕಾತಿ ಹಾಗೂ ಇಲಾಖಾ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ನಿರ್ಲಕ್ಷ್ಯ ವಹಿಸುತ್ತಿರುವುದು ಕನ್ನಡಿಗರಿಗೆ ಬೇಸರ ಮತ್ತು ಆಕ್ರೋಶ ಮೂಡಿಸಿದೆ’ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ‘ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ಭರ್ತಿ, ಬಡ್ತಿಗೆ ನಡೆಸುವ ಪರೀಕ್ಷೆಯನ್ನು ಕನ್ನಡದಲ್ಲೂ ನಡೆಸಲು ಪ್ರಯತ್ನ ನಡೆದಿದೆ. ಆದರೆ, ಕೆಲ ಸ್ವಲ್ಪ ಕಾಲ ಬೇಕಾಗಬಹುದು. ‘ರೈಲ್ವೆ ಮಂಡಳಿ ಪರೀಕ್ಷೆಯ ಬದಲಾವಣೆಗಳತ್ತ ಚಿಂತನೆ ನಡೆಸಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.