
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ ಜಕರಯ್ಯ ಕೋರೆಬೋಯನ್ ವಿರುದ್ಧ ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಗುತ್ತಲದಿಂದ ಹುಬ್ಬಳ್ಳಿಗೆ ಚೆನ್ನೈ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ, ಗದಗ ಸಮೀಪ ಆರೋಪಿ ಕಿರುಕುಳ ನೀಡಿದ್ದಾನೆ. ಯುವತಿ ಸಂಬಂಧಿಕರಿಗೆ ಹಾಗೂ ರೈಲ್ವೆ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಿ ತಿಳಿಸಿದ್ದರು. ರೈಲು ಹುಬ್ಬಳ್ಳಿ ನಿಲ್ದಾಣಕ್ಕೆ ಬಂದಾಗ, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.