ADVERTISEMENT

ದಸರಾ: ವಿಶೇಷ ರೈಲುಗಳ ಸಂಚಾರ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 16:08 IST
Last Updated 8 ಅಕ್ಟೋಬರ್ 2024, 16:08 IST

ಹುಬ್ಬಳ್ಳಿ: ದಸರಾ ಹಬ್ಬದ ಅಂಗವಾಗಿ ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ ಸೌಲಭ್ಯ ಕಲ್ಪಿಸಲಾಗಿದೆ. 

ಅಕ್ಟೋಬರ್ 10ರಂದು ಎಸ್ಎಸ್ಎಸ್ ಹುಬ್ಬಳ್ಳಿ–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ (07305) ರೈಲು ಹುಬ್ಬಳ್ಳಿಯಿಂದ ಬೆಳಿಗ್ಗೆ 11.30ಕ್ಕೆ ಹೊರಟು, ಸಂಜೆ 7.40ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ಅಂದು, ಯಶವಂತಪುರ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (07306) ರೈಲು ಯಶವಂತಪುರದಿಂದ ರಾತ್ರಿ 8.55ಕ್ಕೆ ಹೊರಟು, ಮರುದಿನ ಬೆಳಿಗ್ಗೆ 8.15ಕ್ಕೆ ಬೆಳಗಾವಿ ತಲುಪಲಿದೆ. ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ADVERTISEMENT

11ರಂದು ಬೆಳಗಾವಿ-ಮೈಸೂರು ವಿಶೇಷ ಎಕ್ಸ್‌ಪ್ರೆಸ್ (07307) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ  ಬೆಳಿಗ್ಗೆ 6.25ಕ್ಕೆ ಮೈಸೂರು ತಲುಪಲಿದೆ. ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ಹಾಸನ, ಹೊಳೆ ನರಸೀಪುರ ಮತ್ತು ಕೃಷ್ಣರಾಜನಗರ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ.

12ರಂದು ಮೈಸೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್‌ಪ್ರೆಸ್ (07308) ಮೈಸೂರಿನಿಂದ ರಾತ್ರಿ 10.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7 ಗಂಟೆಗೆ ಹುಬ್ಬಳ್ಳಿ ತಲುಪಲಿದೆ. ಕೃಷ್ಣರಾಜನಗರ, ಹೊಳೆ ನರಸೀಪುರ, ಹಾಸನ, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೆಬೆನ್ನೂರು ಮತ್ತು ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ರೈಲುಗಳು 1 ಎಸಿ 2-ಟೈಯರ್, 1 ಎಸಿ 3-ಟೈಯರ್, 10 ಸ್ಲೀಪರ್ ಕ್ಲಾಸ್, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಸೇರಿದಂತೆ 16 ಬೋಗಿಗಳನ್ನು ಒಳಗೊಂಡಿರುತ್ತವೆ.

ಹೆಚ್ಚಿನ ಮಾಹಿತಿಗೆ,  ಸಹಾಯವಾಣಿ ಸಂಖ್ಯೆ 139ಗೆ ಸಂಪರ್ಕಿಸಬಹುದು ಹಾಗೂ www.enquiry.indianrail.gov.in. ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.