ಹುಬ್ಬಳ್ಳಿ: ನಗರದಲ್ಲಿ ಬುಧವಾರ ಗುಡುಗು, ಸಿಡಿಲು, ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆಯಿತು. ಕಳೆದ ಎರಡು ದಿನಗಳಿಂದ ನಗರದಲ್ಲಿ ಹೆಚ್ಚು ಸೆಕೆ ಇತ್ತು.
ಸಂಜೆ ದಿಢೀರ್ ಮಳೆ ಬಂದಿದ್ದರಿಂದ ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು. ಬೈಕ್ ಸವಾರರು, ವಿದ್ಯಾರ್ಥಿಗಳು ಅಂಗಡಿ ಬಳಿ, ಮೇಲ್ಸೇತುವೆ ಕೆಳಗೆ ನಿಂತು ಆಶ್ರಯ ಪಡೆದರು. ಕೆಲವು ಕಡೆ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿಯಿತು.
ಮಳೆಯಿಂದಾಗಿ ಬಿಆರ್‌ಟಿಎಸ್ ಮಾರ್ಗ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದ್ದರಿಂದ ವಾಹನ ಸವಾರರು ಪರದಾಡಬೇಕಾಯಿತು.
ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಚನ್ನಮ್ಮ ವೃತ್ತದ ಸುತ್ತಲಿನ ರಸ್ತೆಗಳು, ವಿದ್ಯಾನಗರ, ಹೊಸೂರು ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ವಾಹನ ದಟ್ಟಣೆ ಉಂಟಾಗಿತ್ತು. ಗುಡುಗು, ಸಿಡಿಲಿನಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಇಳೆಗೆ ತಂಪೆರೆದ ಮಳೆ
ಧಾರವಾಡ: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಬುಧವಾರ ಮಳೆ ಸುರಿಯಿತು. ಗುಡುಗು, ಮಿಂಚಿನ ಆರ್ಭಟ ಇತ್ತು.
ಸಂಜೆ ಶುರುವಾದ ಮಳೆ ಸುಮಾರು 10 ನಿಮಿಷ ರಭಸವಾಗಿ ಸುರಿದು ನಂತರ ಸಾಧಾರಣವಾಗಿ ಸುರಿಯಿತು. ಕೆಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು. ಬಿಸಿಲಿನಿಂದ ಕಾದಿದ್ದ ಇಳೆಗೆ ತಂಪೆರೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.