ADVERTISEMENT

ಧಾರವಾಡ: ಎರಡು ದಿನ ಮುಂದುವರಿಯಲಿದೆ ಮಳೆ

​ಪ್ರಜಾವಾಣಿ ವಾರ್ತೆ
Published 18 ಮೇ 2022, 4:01 IST
Last Updated 18 ಮೇ 2022, 4:01 IST
ಧಾರವಾಡದ ಸಪ್ತಾಪುರದಲ್ಲಿ ಮಂಗಳವಾರ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಯುವತಿಯರು ಸುರಕ್ಷಿತ ಸ್ಥಳದತ್ತ ಧಾವಿಸಿದರು
ಧಾರವಾಡದ ಸಪ್ತಾಪುರದಲ್ಲಿ ಮಂಗಳವಾರ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಯುವತಿಯರು ಸುರಕ್ಷಿತ ಸ್ಥಳದತ್ತ ಧಾವಿಸಿದರು   

ಧಾರವಾಡ: ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನದಿಂದ ಸಾಧಾರಣ ಮಳೆ ಸುರಿಯಿತು. ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗ ತಿಳಿಸಿದೆ.

ಜಿಲ್ಲೆಯಾದ್ಯಂತ ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಧಾರವಾಡ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಧ್ಯಾಹ್ನದಿಂದ ನಿರಂತರವಾಗಿ ಸಾಧಾರಣ ಮಳೆ ಸುರಿಯಿತು. ಹೀಗಾಗಿ ಮುಂಗಾರು ಆರಂಭಕ್ಕೂ ಮೊದಲೇ ಮಳೆಗಾಲದ ವಾತಾವರಣ ನಿರ್ಮಾಣವಾಗಿದೆ.

ಅಳ್ನಾವರ ಹಾಗೂ ಕಲಘಟಗಿ ಭಾಗಗಳಲ್ಲಿ ಕೆಲ ನಿಮಿಷ ಮಳೆ ಸುರಿದಿದೆ. ನವಲಗುಂದ, ಅಣ್ಣಿಗೇರಿ ಹಾಗೂ ಕುಂದಗೋಳ ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು.

ADVERTISEMENT

‘ನೈರುತ್ಯಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದು, ಅದು ಉತ್ತರದ ಕಡೆ ಚಲಿಸುತ್ತಿದೆ. ಹೀಗಾಗಿ ಮುಂದಿನ 2ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಮಿಂಚು, ಗುಡುಗು ಸಹಿತ ಚದುರಿದ ಮಳೆಯಾಗಲಿದೆ. ಬಿರುಸಿನ ಗಾಳಿ ಬೀಸಲಿದೆ’ ಎಂದು ಹವಾಮಾನ ವಿಭಾಗದ ಮುಖ್ಯಸ್ಥ ಡಾ. ಆರ್.ಎಚ್.ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.