ಅಳ್ನಾವರ: ನಿರಂತರ ಮಳೆಯಿಂದಾಗಿ ಈ ಭಾಗದ ಹಳ್ಳ ಮತ್ತು ಕೆರೆಗಳು ತುಂಬಿವೆ. ಕೆರೆ, ಹಳ್ಳ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ ಹೇಳಿದರು.
ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆ ಶುಕ್ರವಾರ ಹೂಲಿಕೇರಿ ಇಂದಿರಮ್ಮನ ಕೆರೆಗೆ ಭೇಟಿ ನೀಡಿ ನೀರಿನ ಮಟ್ಟ ಹಾಗೂ ಒಳ ಹರಿವು ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಕೆರೆಯ ನೀರಿನ ಮಟ್ಟವನ್ನು ಸದಾ ಗಮನಿಸಲಾಗುತ್ತಿದೆ. ಜಮೀನುಗಳಿಗೆ ತೆರಳುವ ರೈತರು ಜಾಗೃತಿ ವಹಿಸಬೇಕು. ಜಾನುವಾರು ಬಗ್ಗೆ ಕಾಳಜಿ ಇರಬೇಕು ಎಂದರು.
ಕೆರೆಯ ಗೇಟುಗಳನ್ನು ಸುವ್ಯವಸ್ಥಿತವಾಗಿ ಇಟ್ಟುಕೊಳ್ಳಬೇಕು ಎಂದು ಸಣ್ಣ ನೀರಿವಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅಳ್ನಾವರ ಪಟ್ಟಣದಲ್ಲಿ ಮಳೆಗಾಲ ಬಗ್ಗೆ ಹಲವಾರು ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿಗಳನ್ನು ಸ್ವಚ್ಚಗೊಳಿಸಲಾಗಿದೆ. ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಮನೆಗಳ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಶಿಥಿಲಗೊಂಡಿರುವ ಮನೆಗಳಲ್ಲಿ ವಾಸವಾಗಿರುವುದು ಅಪಾಯ. ಅತಿಯಾದ ಮಳೆಯ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ ಎಂದರು.
ಹೂಲಿಕೇರಿ ಕೆರೆಗೆ ಹೊಸದಾಗಿ ಕಟ್ಟಲಾದ ತಡೆಗೋಡೆ ಕಾಮಗಾರಿ ವೀಕ್ಷಣೆ ಮಾಡಿದ ನಂತರ ಗ್ರಾಮಸ್ಥರ ಜೊತೆ ಅವರು ಮಾತನಾಡಿ, ಮಳೆಗಾಲದ ಅನಹಾತುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಎಂಜನಿಯರ್ ಆರ್.ಎಸ್.ಪಾಟೀಲ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪ್ರಕಾಶ ಮಗದುಮ್, ಕಂದಾಯ ನೀರಿಕ್ಷಕ ವಾಶೀಂ ಜಾಗೀರದಾರ, ಗುರುರಾಜ ಸಬನೀಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.