ಧಾರವಾಡದ ರಂಗಾಯಣದಲ್ಲಿ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಪಾಟೀಲ ಪುಷ್ಪನಮನ ಸಲ್ಲಿಸಿದರು
ಧಾರವಾಡ: ಹೃದಯಾಘಾತದಿಂದ ನಿಧನರಾದ ರಂಗಭೂಮಿ ಕಲಾವಿದ ಹಾಗೂ ಇಲ್ಲಿನ ರಂಗಾಯಣ ನಿರ್ದೇಶಕ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಗರದ ರಂಗಾಯಣದ ಆವರಣದಲ್ಲಿ ಮಂಗಳವಾರ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ಸೇರಿದಂತೆ ರಂಗಭೂಮಿ ಕಲಾವಿದರು, ಅಭಿಮಾನಿಗಳು, ಪಾರ್ಥಿವ ಶರೀರಕ್ಕೆ ಪುಷ್ಪಮಾಲೆ ಹಾಕಿ, ಅಂತಿಮ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ, ತಹಶೀಲ್ದಾರ್ ಡಿ.ಎಚ್.ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.