ADVERTISEMENT

ಹುಬ್ಬಳ್ಳಿ | ರಾಮ ಮಂದಿರ ನಿರ್ಮಾಣ ಜವಾಬ್ದಾರಿ ಹೆಚ್ಚಿಸಿದೆ: ಪೇಜಾವರ ಶ್ರೀ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 16:17 IST
Last Updated 11 ಜನವರಿ 2026, 16:17 IST
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ   

ಹುಬ್ಬಳ್ಳಿ: ‘ಹಿಂದೂ ಸಮಾಜದ ಒಗ್ಗಟ್ಟಿನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಅಲ್ಲಿಗೆ ಜವಾಬ್ದಾರಿ ಮುಗಿದಿಲ್ಲ, ಮತ್ತಷ್ಟು ಹೆಚ್ಚಿದೆ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಇಲ್ಲಿನ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಾನುವಾರ ಹಿಂದೂ ಸಮ್ಮೇಳನದಲ್ಲಿ ಅವರು, ‘ಮಂದಿರವನ್ನು ಮಂದಿರವಾಗಿಯೇ ಉಳಿಸುವ ಜವಾಬ್ದಾರಿ ಹಿಂದೂ ಸಮುದಾಯದ ಮೇಲಿದೆ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ಸಂತತಿ ಹಿಂದೂ ಸಂಸ್ಕೃತಿ ಪಾಲಿಸಿ, ಬಹುಸಂಖ್ಯಾತರಾಗಿ ಉಳಿದರೆ ಮಾತ್ರ ಇದು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರ ಹೃದಯದಲ್ಲಿ ರಾಮನ ಪ್ರತಿಷ್ಠಾಪನೆ ಆಗಬೇಕು, ಮಕ್ಕಳಿಗೆ ಸಂಸ್ಕಾರ ಬೋಧಿಸಬೇಕು’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.