ADVERTISEMENT

ರಾಮಚಂದ್ರಾಪುರ ಶ್ರೀ ವಿರುದ್ಧದ ಸಿ.ಡಿ ಪ್ರಕರಣ: ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 5 ಮೇ 2020, 19:28 IST
Last Updated 5 ಮೇ 2020, 19:28 IST
   

ಧಾರವಾಡ: ರಾಮಚಂದ್ರಾಪುರ ಮಠದ ಘನತೆಗೆ ಚ್ಯುತಿ ಉಂಟು ಮಾಡುವಂಥ ಸಿ.ಡಿ ತಯಾರಿಕೆಗೆ ಸಂಬಂಧಿಸಿದ ಪ್ರಕರಣದಿಂದ ಹೆಸರು ಕೈ ಬಿಡುವಂತೆ ಕೋರಿ ಆರೋಪಿ ವಿಶ್ವನಾಥ ಫಣಿರಾಜ ಗೋಪಿ ಸಲ್ಲಿಸಿದ್ದ ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಆದೇಶ ಪ್ರಕಟಿಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಪೀಠ, ಸಾಕ್ಷಿಗಳ ಹೇಳಿಕೆ ದಾಖಲೆ ಆರಂಭಗೊಂಡ ದಿನದಿಂದ ಒಂದು ವರ್ಷದ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸಬೇಕು ಎಂದು ನಿರ್ದೇಶನ ನೀಡಿತು.

ಸ್ವಾಮೀಜಿಯವರನ್ನು ಹೋಲುವ ವ್ಯಕ್ತಿಯನ್ನಿರಿಸಿಕೊಂಡು, ತಂತ್ರಜ್ಞಾನ ಬಳಸಿ ಸಿಡಿ ತಯಾರಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು 2010ರಲ್ಲಿ ಶ್ರೀಮಠ ದೂರು ಸಲ್ಲಿಸಿತ್ತು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.

ADVERTISEMENT

ಕುಮಟಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಮೊದಲು ಆರೋಪಿ ಮನವಿಯನ್ನು ಅಲ್ಲಿನ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.