ADVERTISEMENT

ಸರ್ಕಾರ ಯೋಜನೆ ತಲುಪಿಸುತ್ತಿರುವ ಪಂಚಾಯತ್‌ರಾಜ್ ಇಲಾಖೆ

ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕ್ರೀಡೋತ್ಸವದಲ್ಲಿ ಎಲ್.ಕೆ.ಅತೀಕ್

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 5:02 IST
Last Updated 22 ಅಕ್ಟೋಬರ್ 2022, 5:02 IST
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಲ್.ಕೆ.ಅತೀಕ್ ಅವರಿಗೆ ಗುರುದತ್ತ ಹೆಗಡೆ ನೆನಪಿನ ಕಾಣಿಕೆ ನೀಡಿದರು
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಎಲ್.ಕೆ.ಅತೀಕ್ ಅವರಿಗೆ ಗುರುದತ್ತ ಹೆಗಡೆ ನೆನಪಿನ ಕಾಣಿಕೆ ನೀಡಿದರು   

ಧಾರವಾಡ: ‘ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಮೀಣ ಮೂಲಸೌಕರ್ಯ ಕಲ್ಪಿಸಿ, ಗಣನೀಯ ಬದಲಾವಣೆ ತರುವ ಜತೆಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ಇಲಾಖೆಯ ಪಾತ್ರ ಮಹತ್ವದ್ದಾಗಿದೆ’ ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಎಲ್.ಕೆ. ಅತೀಕ್ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಶುಕ್ರವಾರ ಜರುಗಿದ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ‘ಪ್ರಸ್ತುತ ಆಧುನಿಕ ದಿನಗಳಲ್ಲಿ ಆರ್.ಡಿ.ಪಿ.ಆರ್. ಇಲಾಖೆಯು ಆಧುನಿಕ ತಂತ್ರಜ್ಞಾನವನ್ನು ಉತ್ತಮವಾಗಿ ಬಳಸಿಕೊಂಡು ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದರು.

ADVERTISEMENT

ಒಳಾಂಗಣ ಕ್ರೀಡೆಗಳಾದ ಕೇರಮ್, ಚೆಸ್, ಟೆಬಲ್ ಟೆನ್ನಿಸ್, ಬ್ಯಾಡ್ಮಿಂಟನ್ ಹಾಗೂ ಹೊರಾಂಗಣ ಕ್ರೀಡೆಗಳಾದ ಕ್ರಿಕೆಟ್, ವಾಲಿಬಾಲ್, ಕಬಡ್ಡಿ ಸ್ಪರ್ಧೆಯಲ್ಲಿ ರಾಜ್ಯದ 31 ಜಿಲ್ಲೆಗಳಿಂದ 23 ಕ್ರೀಡಾ ತಂಡಗಳ 1,530 ಕ್ರೀಡಾಪಟುಗಳು ಭಾಗವಹಿಸಿದ್ದರು.

ಸಂಘದ ರಾಜ್ಯ ಅಧ್ಯಕ್ಷ ಸಿ. ತೇಜೇಶ್ವರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಯೋಜನಾ ನಿರ್ದೇಶಕಿ ಬಿ.ಎಸ್.ಮೂಗನೂರಮಠ, ವಿವಿಧ ತಾಲ್ಲೂಕುಗಳ ಇಒಗಳಾದ ಜಿ.ಎಂ.ಕಂದನೂರ, ಜಗದೀಶ ಪಾಟೀಲ, ಅನುರಾಧಾ ವಸ್ತ್ರದ, ಪದಾಧಿಕಾರಿಗಳಾದ ದೇಸಾಯಿ, ನಾಗರಾಜ ಬಿದರಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.