ADVERTISEMENT

ಸಚಿವ ಸ್ಥಾನ ಬಿಡಲು ಸಿದ್ದ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2021, 7:03 IST
Last Updated 29 ಡಿಸೆಂಬರ್ 2021, 7:03 IST
ಸಚಿವ ಕೆ.ಎಸ್. ಈಶ್ವರಪ್ಪ
ಸಚಿವ ಕೆ.ಎಸ್. ಈಶ್ವರಪ್ಪ   

ಹುಬ್ಬಳ್ಳಿ: ಸಚಿವ ಸ್ಥಾನ ಧಾರಾಳವಾಗಿ ಬಿಟ್ಟು, ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ದನಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಂಪುಟದಲ್ಲಿ ಹಿರಿಯರನ್ನ ಕೈಬಿಡಬೇಕೆಂದು ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.

ಸಂಪುಟದಿಂದ ನನ್ನನ್ನು ಕೈ ಬಿಡುವುದಿದ್ದರೆ ನಾನು ಸಹ ತಯಾರಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೆಯದು ಹಾಗೂ ಕೆಟ್ಟದು ಎನ್ನುವುದು ನನಗೆ ಗೊತ್ತು ಎಂದರು.

ADVERTISEMENT

ಕಾರ್ಯಕಾರಿಣಿಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿವೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ದೊಡ್ಡ ಗೆಲುವಾಗಿದೆ. ಇದಕ್ಕಾಗಿ ರಾಜ್ಯದ ಜನರಿಗೆ ವಿಶೇಷ ಅಭಿನಂದನೆ ಸಲ್ಲಿಸಬೇಕು. ಸಿಂದಗಿ ಉಪ ಚುನಾವಣೆ ಅತಿ ಹೆಚ್ಚು ಮತಗಳನ್ನು ಕೊಟ್ಟಿದ್ದಕ್ಕೆ ಜನರಿಗೆ ಧನ್ಯವಾದಗಳು ಎಂದರು.

ಜ. 5 ರಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆಗಳ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.