ADVERTISEMENT

ಹುಬ್ಬಳ್ಳಿ: ಪುಸ್ತಕಗಳ ಬಿಡುಗಡೆ ನಾಳೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 19:30 IST
Last Updated 31 ಜನವರಿ 2022, 19:30 IST

ಹುಬ್ಬಳ್ಳಿ: ‘ಹೂಲಿ ಪ್ರಕಾಶನದ ವತಿಯಿಂದ ಪ್ರಕಟಿಸಲಾದ ‘ಹೂಲಿ ಮಡಿವಾಳಪ್ಪನವರು’ ಹಾಗೂ ‘ಹೂದೋಟದ ಬೆಳದಿಂಗಳು’ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಫೆ.2ರಂದು ಮಧ್ಯಾಹ್ನ 4 ಗಂಟೆಗೆ ಮೂರುಸಾವಿರ ಮಠದ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಜರುಗಲಿದೆ’ ಎಂದು ಶರಣ ಮಡಿವಾಳಪ್ಪ ಚಾರಿಟಬಲ್‌ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ವೀರಣ್ಣ ಮ. ಹೂಲಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಟ್ರಸ್ಟ್‌ ಅಧ್ಯಕ್ಷ ಷಣ್ಮುಖ ಹೂಲಿ ಅಧ್ಯಕ್ಷತೆ ವಹಿಸುವರು. ಸಾಹಿತಿ ಶ್ಯಾಮಸುಂದರ ಬಿದರಕುಂದಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ನವಿಲೆ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸಿ.ಎ. ಸುರೇಶ ಚನ್ನಿ, ಬಣಗಾರ ಸಮಾಜದ ಅಧ್ಯಕ್ಷ ಅನಿಲ ಕವಿಶೆಟ್ಟಿ, ಉತ್ತರ ಕರ್ನಾಟಕ ಜ್ಯುವೆಲರ್ಸ್‌ ಸಂಘಗಳ ಮಹಾಸಭಾದ ಅಧ್ಯಕ್ಷ ಗೋವಿಂದ ಆರ್‌. ನಿರಂಜನ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಾಹಿತಿ ಮಹಾಂತಪ್ಪ ನಂದೂರ ಪುಸ್ತಕ ವಿಮರ್ಶೆ ಮಾಡಲಿದ್ದಾರೆ’ ಎಂದು ಹೇಳಿದರು.

ನಿವೃತ್ತ ಗ್ರಂಥಪಾಲಕ ಬಿ.ಎಸ್‌. ಮಾಳವಾಡ, ಬಸವರಾಜ ಹೂಲಿ, ವೀರಭದ್ರಪ್ಪ ಹೂಲಿ ಹಾಗೂ ಭಾಗ್ಯಶ್ರೀ ಹೂಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.