ADVERTISEMENT

ಮಳೆಹಾನಿ ಕುರಿತು 10 ದಿನದೊಳಗೆ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ: ಅಧ್ಯಯನ ತಂಡ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 10:19 IST
Last Updated 8 ಸೆಪ್ಟೆಂಬರ್ 2022, 10:19 IST
ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಅಧ್ಯಯನ ತಂಡ ಪರಿಶೀಲನೆ ನಡೆಸಿತು.
ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಅಧ್ಯಯನ ತಂಡ ಪರಿಶೀಲನೆ ನಡೆಸಿತು.   

ಹುಬ್ಬಳ್ಳಿ: ‘ಅತಿವೃಷ್ಟಿಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ನಂತರ 10 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ನಷ್ಟದ ಬಗ್ಗೆ ವಿಸ್ತೃತ ವರದಿ ಸಲ್ಲಿಸುತ್ತೇವೆ’ ಎಂದು ಕೇಂದ್ರ ಸರ್ಕಾರದ ಅಂತರ್ ಸಚಿವಾಲಯದ ಅಧಿಕಾರಿಗಳ ಅಧ್ಯಯನ ತಂಡದ ಸದಸ್ಯ ಅಶೋಕಕುಮಾರ ಹೇಳಿದರು.

ಅತಿವೃಷ್ಟಿ ಹಾನಿಗೊಳಗಾದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕಿರೇಸೂರಿಗೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

‘ಅತಿವೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಆಗಿರುವ ಹಾನಿಯನ್ನು ಅಧ್ಯಯನ ಮಾಡಲಾಗುತ್ತಿದೆ. ಜಿಲ್ಲಾಡಳಿತವು ಕಳೆದ ಎರಡು ಮೂರು ದಿನಗಳಲ್ಲಿ ಉಂಟಾಗಿರುವ ನಷ್ಟದ ಮಾಹಿತಿಯನ್ನು ಕ್ರೋಢೀಕರಿಸಿ ಒದಗಿಸಲಿದೆ. ಎಲ್ಲಾ ಮಾಹಿತಿಯನ್ನು ಮೌಲ್ಯಮಾಪನ ಮಾಡಿ ಹತ್ತು ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ತಂಡವು ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.