ADVERTISEMENT

ಹುಬ್ಬಳ್ಳಿ: ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 27 ಜನವರಿ 2023, 5:50 IST
Last Updated 27 ಜನವರಿ 2023, 5:50 IST
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ರೈಲ್ವೆ ಇನ್‌ಸ್ಟಿಟ್ಯೂಟ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ ಮಾತನಾಡಿದರು
ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ರೈಲ್ವೆ ಇನ್‌ಸ್ಟಿಟ್ಯೂಟ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ ಮಾತನಾಡಿದರು   

ಹುಬ್ಬಳ್ಳಿ: ನಗರದ ವಿವಿಧೆಡೆ ಶಾಲಾ–ಕಾಲೇಜುಗಳು ಹಾಗೂ ಸಂಘ–ಸಂಸ್ಥೆಗಳು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದವು. ಧ್ವಜಾರೋಹಣ ನೆರವೇರಿಸಿದ ಗಣ್ಯರು, ಗಣರಾಜ್ಯೋತ್ಸವ ಸಂಭ್ರಮದ ಹಿಂದಿನ ಮಹತ್ವ ಹಾಗೂ ಅದಕ್ಕೆ ಶ್ರಮಿಸಿದವರ ಬಗ್ಗೆ ಮಾತನಾಡಿದರು.

ತಿಮ್ಮಸಾಗರ ಗುಡಿಯ ಹಿಂಭಾಗದಲ್ಲಿರುವ ಭಾವಸಾರ ಹಾಸ್ಟೆಲ್‌ನಲ್ಲಿ ಭಾವಸಾರ ವ್ಹಿಜನ್ ಇಂಡಿಯಾ ಸಂಸ್ಥೆ, ವಿದ್ಯಾನಗರದ ರಂಭಾಪುರಿ ಭವನದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕತಿಕ ಸೇವಾ ಸಂಘ, ಹೊಸೂರಿನ ಬಾಲಾಜಿ ಆಸ್ಪತ್ರೆ, ಮೊರಾರ್ಜಿ ನಗರದ ಬಸವ ಕೇಂದ್ರ, ಕುಸುಗಲ್ ರಸ್ತೆಯ ಆಕ್ಸ್‌ಫರ್ಡ್ ಕಾಲೇಜು, ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್‌ನ ಸರ್ಕಾರಿ ಪ್ರೌಢಶಾಲೆ, ಡಾ. ಆರ್‌.ಬಿ. ಪಾಟೀಲ ಮಹೇಶ ಪಿಯು ಕಾಲೇಜು, ನವನಗರ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ, ಉಣಕಲ್ಲದ ಓಂ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.

ಚಾಣಕ್ಯಪುರಿಯ ಎಸ್‌ಎಸ್‌ಕೆ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮತ್ತು ಪದವಿ ಕಾಲೇಜು, ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯ, ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಸಂಸದರ ಕಚೇರಿ, ಎಪಿಎಂಸಿ ವ್ಯಾಪಾರಸ್ಥರ ಸಂಘ, ಅರವಿಂದ ನಗರದ ಹುಲಿಗೆಮ್ಮ ದೇವಸ್ಥಾನ, ಶಕ್ತಿ ಕಾಲೊನಿಯ ಜೆ.ಕೆ. ಇಂಗ್ಲಿಷ್ ಮಾಧ್ಯಮ ಶಾಲೆ, ಭವಾನಿನಗರದ ಭಾವದೀಪ ಶಿಕ್ಷಣ ಸಂಸ್ಥೆಯ ಶ್ರೀಮತಿ ವಿಮಲಾ ಕುಲಕರ್ಣಿ ಮೆಮೋರಿಯಲ್ ಶಾಲೆ, ಚೇತನಾ ಕಾಲೇಜು, ಕೇಶ್ವಾಪುರದ ಲೆಕ್ಕಪರಿಶೋಧಕರ ಸಂಸ್ಥೆ, ಕೆಎಲ್‌ಇ ಪ್ರೇರಣಾ ಕಾಲೇಜು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಕಮರಿಪೇಟೆಯ ಶ್ರೀರಾಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗಣ್ಯರು ಭಾಷಣ ಮಾಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.