ADVERTISEMENT

ಓಲೈಕೆ ರಾಜಕಾರಣದಿಂದ ಮೀಸಲಾತಿ ಹೆಚ್ಚಳ: ಜಗದೀಶ ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 13:28 IST
Last Updated 20 ಜೂನ್ 2025, 13:28 IST
ಜಗದೀಶ ಶೆಟ್ಟರ್‌, ಸಂಸದ
ಜಗದೀಶ ಶೆಟ್ಟರ್‌, ಸಂಸದ   

ಹುಬ್ಬಳ್ಳಿ: ‘ಮುಸ್ಲಿಮರು ಹೊರತುಪಡಿಸಿ ಬೇರೆಯವರು ತಮಗೆ ಬೆಂಬಲ ನೀಡುವುದಿಲ್ಲ ಎಂಬ ಮನಸ್ಥಿತಿ ಕಾಂಗ್ರೆಸ್‌ ನಾಯಕರಲ್ಲಿ ಮೂಡಿದ್ದು, ಅವರಲ್ಲಿ ಭಯ ಶುರುವಾಗಿದೆ. ಅದಕ್ಕೆ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು.

‘ಕಾಂಗ್ರೆಸ್‌ ಮೊದಲಿನಿಂದಲೂ ಓಲೈಕೆ ರಾಜಕಾರಣ ಮಾಡುತ್ತಿದ್ದು, ಚುನಾವಣೆಯಲ್ಲಿ ಗೆಲ್ಲುವುದಷ್ಟೇ ಅದರ ಉದ್ದೇಶ. ಮುಸ್ಲಿಮರಿಗಾಗಿ ಅವರು ಏನೂ ಮಾಡಿಲ್ಲ. ರಾಜ್ಯ ಸರ್ಕಾರವು ಸ್ಥಿರತೆ ಕಳೆದುಕೊಂಡಿದ್ದು, ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಲೋಕಾಯುಕ್ತ ಎಸ್ಪಿ ವಿರುದ್ಧವೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಸಚಿವ ಕೃಷ್ಣ ಬೈರೇಗೌಡರೇ ಹೊರಹಾಕಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎನ್ನಲು ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.