ADVERTISEMENT

ನಿವೇಶನ ಹಂಚಿಕೆ: ಅರ್ಹರಿಗೆ ನೀಡುವಂತೆ ಆಗ್ರಹಿಸಿ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2019, 16:25 IST
Last Updated 8 ಮಾರ್ಚ್ 2019, 16:25 IST
ರೇವಡಿಹಾಳದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿದ್ದ ನಿವೇಶಗಳನ್ನು ಅನರ್ಹರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ನೇತೃತ್ವವದಲ್ಲಿ ನಿವೇಶನ ವಂಚಿತರು ಪಾದಯಾತ್ರೆ ನಡೆಸಿದರು– ಪ್ರಜಾವಾಣಿ ಚಿತ್ರ
ರೇವಡಿಹಾಳದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿದ್ದ ನಿವೇಶಗಳನ್ನು ಅನರ್ಹರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ, ನ್ಯಾಯಕ್ಕೆ ಆಗ್ರಹಿಸಿ ಬಹುಜನ ಸಮಾಜ ಪಕ್ಷದ ನೇತೃತ್ವವದಲ್ಲಿ ನಿವೇಶನ ವಂಚಿತರು ಪಾದಯಾತ್ರೆ ನಡೆಸಿದರು– ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ರೇವಡಿಹಾಳದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿದ್ದ ನಿವೇಶಗಳನ್ನು ಅನರ್ಹರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಖಂಡಿಸಿ ಬಹುಜನ ಸಮಾಜ ಪಕ್ಷದ ನೇತೃತ್ವವದಲ್ಲಿ ನಿವೇಶನ ವಂಚಿತರು ಶುಕ್ರವಾರ ಪಾದಯಾತ್ರೆ ನಡೆಸಿದರು.

ರೇವಡಿಹಾಳದಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಸಿದ ಅವರು, ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಸ್ಥಳೀಯರಲ್ಲದ ಹಾಗೂ ಅನರ್ಹರಿಗೆ ನಿವೇಶ ನೀಡಲಾಗಿದೆ. ಆ ಬಗ್ಗೆ ಈ ಕೂಡಲೇ ತನಿಖೆ ನಡೆಸಬೇಕು. ಅರ್ಹರಿಗೆ ಹಂಚಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ 25 ವರ್ಷಗಳ ಹಿಂದೆ ನಿವೇಶನ ಅಭಿವೃದ್ಧಿಪಡಿಸಿ ಹಂಚಿಕೆ ಮಾಡಿತ್ತು. ಆದರೆ ಯಾವುದೇ ನಿಯಮಗಳನ್ನು ಪಾಲಿಸದ ಕಾರಣ ಊರಿನವರಿಗೆ ನಿವೇಶನ ಸಿಕ್ಕಿಲ್ಲ. ಅನ್ಯಾಯಕ್ಕೆ ಒಳಗಾದವರಿಗೆ ಈಗಲಾದರೂ ನ್ಯಾಯ ಕೊಡಿಸಬೇಕು. ದಲಿತರಿಗೆ ಅನ್ಯಾಯ ಮಾಡಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಮುಖಂಡರಾದ ವೀರಪ್ಪ ಮಾದಾರ್, ಸುರೇಶ ಖಾನಾಪುರ್, ವಿಜಯ್ ಕರ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.