ಅಪಘಾತ
–ಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ತಾಲ್ಲೂಕಿನ ಛಬ್ಬಿ ಗ್ರಾಮದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಬೆಳಗಲಿ ಗ್ರಾಮದ ದ್ಯಾಮಣ್ಣ ಉಣಕಲ್ (45) ಮೃತಪಟ್ಟವರು. ಮಲ್ಲಪ್ಪ ನಾಟಿಕರ, ಮಹದೇವಪ್ಪ ತಳವಾರ ಮತ್ತು ಯಲ್ಲಪ್ಪ ಮೆಲಗಾರಿ ಗಾಯಗೊಂಡಿದ್ದಾರೆ. ಅವರನ್ನು ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮಿಳುನಾಡಿನ ಲಾರಿ ಚಾಲಕ ಸಂಪತ್ ಕುಮಾರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಸಾವು: ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳ-ಇನಾಂ ವೀರಾಪುರ ರಸ್ತೆಯಲ್ಲಿ ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ಗಿರಿಯಾಲ ಗ್ರಾಮದ ಬಸವರಾಜ ಸಲಗಾರ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾಬುಸಾಬ್ ಅವರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.