ADVERTISEMENT

ಹುಬ್ಬಳ್ಳಿ: ರಸ್ತೆ ತಡೆ, ಮುಖ್ಯಮಂತ್ರಿ, ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 6:11 IST
Last Updated 28 ಸೆಪ್ಟೆಂಬರ್ 2020, 6:11 IST
ಕರ್ನಾಟಕ ಬಂದ್ ಅಂಗವಾಗಿ ರೈತ ಮುಖಂಡರು ರಸ್ತೆ ತಡೆ ನಡೆಸಿದರು
ಕರ್ನಾಟಕ ಬಂದ್ ಅಂಗವಾಗಿ ರೈತ ಮುಖಂಡರು ರಸ್ತೆ ತಡೆ ನಡೆಸಿದರು   

ಹುಬ್ಬಳ್ಳಿ: ಕರ್ನಾಟಕ ಬಂದ್ ಅಂಗವಾಗಿ, ವಿವಿಧ ಸಂಘಟನೆಗಳ ಮುಖಂಡರು ಭಾನುವಾರ ಬೆಳಿಗ್ಗೆ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮುಖಂಡರು ಕೃಷಿ, ಕಾರ್ಮಿಕ ಹಾಗೂ ಭೂ ಸುಧಾರಣೆ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ, ಪ್ರಧಾನಿ ಪ್ರತಿಕೃತಿ ದಹಿಸಿ ಆಕ್ರೋಶ

ADVERTISEMENT

ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿಯೇತರ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘಟನೆಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಚನ್ನಮ್ಮನ ವೃತ್ತದಲ್ಲಿ ಜಮಾಯಿಸಿದ ಜೆಡಿಎಸ್, ಕಾಂಗ್ರೆಸ್, ಎಎಪಿ ಕಾರ್ಯಕರ್ತರು ಹಾಗೂ ಕಾರ್ಮಿಕ, ರೈತ, ಆಟೊ, ಟ್ಯಾಕ್ಸಿ ಚಾಲಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರಮುಖ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.