ADVERTISEMENT

ರಸ್ತೆ ಮೇಲ್ದರ್ಜೆಗೆ; ಸ್ವಾಗತ: ಎಂ.ಸಿ.ಹಿರೇಮಠ

​ಪ್ರಜಾವಾಣಿ ವಾರ್ತೆ
Published 5 ಮೇ 2022, 3:21 IST
Last Updated 5 ಮೇ 2022, 3:21 IST
ಎಂ.ಸಿ.ಹಿರೇಮಠ
ಎಂ.ಸಿ.ಹಿರೇಮಠ   

ಅಳ್ನಾವರ: ಕೇಂದ್ರ ಸರ್ಕಾರದ ಭಾರತ ಮಾಲಾ-2 ಯೋಜನೆಯಡಿ ರಾಮನಗರ-ಅಳ್ನಾವರ-ಧಾರವಾಡ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸಿ, ನವಲಗುಂದ ಮೂಲಕ ಗದಗ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸಚಿವರು ತಾತ್ವಿಕ ಒಪ್ಪಿಗೆ ನೀಡಿರುವುದು ಸಂತಸ ತಂದಿದೆ ಎಂದು ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ ಹೇಳಿದ್ದಾರೆ.

ಈ ರಸ್ತೆಯ ನಿರ್ಮಾಣದಿಂದ ವಾಣಿಜ್ಯೋದ್ಯಮ ಬೆಳವಣಿಗೆ ಕಾಣಲಿದ್ದು, ಕೃಷಿ ಮತ್ತು ಕೈಗಾರಿಕೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ರಾಮನಗರ-ಧಾರವಾಡ ರಸ್ತೆ ಮೂಲಕ ಸಂಚರಿಸುವ ಜನರು ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT