ADVERTISEMENT

ದೇಶಕ್ಕೆ ಆರ್‌ಎಸ್‌ಎಸ್‌ ಮಾರಕ: ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 16:20 IST
Last Updated 16 ಸೆಪ್ಟೆಂಬರ್ 2024, 16:20 IST

ಮುಧೋಳ (ಬಾಗಲಕೋಟೆ ಜಿಲ್ಲೆ): ‘ಧರ್ಮ ಮತ್ತು ಸಮುದಾಯಗಳ ನಡುವೆ ಕಂದಕ ಸೃಷ್ಠಿಸುವಲ್ಲಿ ನಿರತವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದೇಶಕ್ಕೆ ಮಾರಕವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

‘ಬಿಜೆಪಿ, ಆರ್‌ಎಸ್‌ಎಸ್‌ನಿಂದ ಜನರು ಅಂತರ ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ, ಪಶ್ಚಾತಾಪ ಪಡಬೇಕಾಗುತ್ತದೆ. ಆರ್‌ಎಸ್‌ಎಸ್‌ನ ಬಿ.ಎಲ್. ಸಂತೋಷ ಅಂಥವರು‌ ಬಿಜೆಪಿಯನ್ನು ಹತೋಟಿಯಲ್ಲಿ ಇರಿಸಿಕೊಂಡಿದ್ದಾರೆ. ಹಿಂಬಾಗಿಲಿನಿಂದ ಆಡಳಿತ ನಡೆಸಿ, ಪ್ರಧಾನಿಯನ್ನು ನಿಯಂತ್ರಿಸುತ್ತಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಬಿಜೆಪಿಗೆ ದಲಿತರು ಹಾಗೂ ಹಿಂದುಳಿದ ಜನಾಂಗದವರ ಬಗ್ಗೆ ಯಾವುದೇ ಒಳ್ಳೆಯ ಭಾವನೆ ಇಲ್ಲ. ಬಿಜೆಪಿಗೆ ಮುಂದಿನ ದಿನಮಾನದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರು ತಕ್ಕ‌ ಪಾಠ ಕಲಿಸುವುದು ಸತ್ಯ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.