ADVERTISEMENT

ಹುಬ್ಬಳ್ಳಿ | RSS ಪಥಸಂಚಲನ: ಪ್ರಲ್ಹಾದ ಜೋಶಿ, ಜಗದೀಶ ಶೆಟ್ಟರ್ ಭಾಗಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 19:42 IST
Last Updated 5 ಅಕ್ಟೋಬರ್ 2025, 19:42 IST
<div class="paragraphs"><p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಗಣವೇಷಧಾರಿಗಳು</p></div>

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಗಣವೇಷಧಾರಿಗಳು

   

ಪ್ರಜಾವಾಣಿ ಚಿತ್ರ: ಗೋವಿಂದರಾಜ ಜವಳಿ

ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಸಂಘದ ಹುಬ್ಬಳ್ಳಿ ಮಹಾನಗರ ಘಟಕದ ವತಿಯಿಂದ ನಗರದಲ್ಲಿ ಭಾನುವಾರ ಗಣವೇಷಧಾರಿಗಳ ಆಕರ್ಷಕ ಪಥಸಂಚಲನ ನಡೆಯಿತು.

ADVERTISEMENT

ನೆಹರೂ ಮೈದಾನದಿಂದ ಎರಡು ತಂಡಗಳಾಗಿ ಪಥಸಂಚಲನ ಆರಂಭವಾಯಿತು. ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿದ ತಂಡಗಳು, ದುರ್ಗದಬೈಲ್ ವೃತ್ತದಲ್ಲಿ ಸಂಗಮಗೊಂಡು, ಅಲ್ಲಿಂದ ನೆಹರೂ ಮೈದಾನಕ್ಕೆ ಮರಳಿತು. ಹತ್ತು ಸಾವಿರಕ್ಕೂ ಅಧಿಕ ಸ್ವಯಂಸೇವಕರು ಪಾಲ್ಗೊಂಡಿದ್ದರು. 

ಪಥಸಂಚಲನದ ಮಾರ್ಗದಲ್ಲಿ ರಂಗೋಲಿ ಬಿಡಿಸಿ ಸಿಂಗರಿಸಿದ್ದರು. ಗಣವೇಷಧಾರಿಗಳು ಬರುತ್ತಿದ್ದಂತೆ ರಸ್ತೆ ಎರಡೂ ಬದಿ ನಿಂತು ಹೂವು ಎರಚಿ, ‘ಜೈ ಭಾರತ ಮಾತೆ’ ಘೋಷಣೆ ಕೂಗಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಜಗದೀಶ ಶೆಟ್ಟರ್, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮುಖಂಡ ಶಂಕರಪಾಟೀಲ ಮುನೇನಕೊಪ್ಪ ಸೇರಿ ಅನೇಕ ಗಣ್ಯರು ಗಣವೇಷಧಾರಿಗಳಾಗಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌ಎಸ್ಎಸ್ ದೆಹಲಿ ಕೇಂದ್ರದ ಸಹ ಸರಕಾರ್ಯವಾಹ ಕೃಷ್ಣಗೋಪಾಲ, ‘ಮಾದರಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಆರ್‌ಎಸ್‌ಎಸ್ ನಿರಂತರವಾಗಿ ಶ್ರಮಿಸುತ್ತಿದ್ದು, ಸ್ವದೇಶಿ ವಸ್ತುಗಳ ಬಳಕೆ ಹೆಚ್ಚಾಗಬೇಕಿದೆ. ಇದರಿಂದ ಭಾರತದಲ್ಲಿ ತಲೆದೋರಿರುವ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.

‘ಹುಬ್ಬಳ್ಳಿ ಸೇರಿದಂತೆ ದೇಶದಾದ್ಯಂತ ಹಿಂದೂ ಸಮ್ಮೇಳನ ಆಯೋಜಿಸಲು ಸಿದ್ಧತೆ ನಡೆದಿದೆ. ಕಾರ್ಯಕರ್ತರು ಸಂಘದ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಿ, ದೇಶದ ಸಂಸ್ಕೃತಿ, ಪರಂಪರೆ ಬಗ್ಗೆ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಭಾನುವಾರ ಸಂಘದ ಗಣ ವೇಷಧಾರಿಗಳು ಪಥಸಂಚಲನ ನಡೆಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.