
ಪ್ರಜಾವಾಣಿ ವಾರ್ತೆ
ಧಾರವಾಡ: ಹುಬ್ಬಳ್ಳಿಯ ಶಿರಡಿ ಸಾಯಿ ಮಂದಿರದಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ತನಿಖೆ ಮಾಡಿಸುವಂತೆೆ ಎರಡು ತಿಂಗಳ ಹಿಂದೆಯೂ ಮನವಿ ಸಲ್ಲಿಸಿದ್ದೇವೆ. ಮಂದಿರದ ಆಡಳಿತ ಮಂಡಳಿಯವರು ಲೆಕ್ಕ ಪರಿಶೋಧನೆಯಲ್ಲಿ ವಂಚಿಸಿರುವ ಬಗ್ಗೆ ದಾಖಲೆ ನೀಡಿದ್ದೇವೆ. ಈವರೆಗೆ ತನಿಖೆ ಕ್ರಮ ವಹಿಸಿಲ್ಲ’ ಎಂದು ದೂರಿದರು.
ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು (ಡಿಆರ್) ಅವರು ತನಿಖೆ ನಡೆಸಲು ವಿಳಂಬ ಮಾಡುತ್ತಿದ್ದಾರೆ. ತನಿಖೆಗೆ ಕ್ರಮ ವಹಿಸದಿದ್ದರೆ ಮಂದಿರ, ಡಿಆರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.