ಧಾರವಾಡ: ರಾಜ್ಯ ಸರ್ಕಾರ ನೀಡುವ ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ಗುರುವಾರ ಸಮಾಜ ಪರಿವರ್ತನಾ ಟ್ರಸ್ಟ್‌ನ ಎಸ್.ಆರ್. ಹಿರೇಮಠ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್.ರಂಗಪ್ಪ ಪ್ರದಾನ ಮಾಡಿದರು.
ಪ್ರಶಸ್ತಿ ಸ್ವೀಕರಿಸಿದ ಎಸ್.ಆರ್.ಹಿರೇಮಠ ಮಾತನಾಡಿ, ಕೆಲಸದ ನಿಮಿತ್ತ ಪುಣೆಗೆ ಹೋಗಿದ್ದರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಮ್ಮ ಕೆಲಸದ ಒತ್ತಡದ ಮಧ್ಯೆ ಧಾರವಾಡ ಕಚೇರಿಗೆ ಬಂದು ಪ್ರಶಸ್ತಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಎಂದುಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ, ಬೆಂದ್ರೆ ಭವನದ ವ್ಯವಸ್ಥಾಪಕ ಪ್ರಕಾಶ ಬಾಳಿಕಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.