ಧಾರವಾಡ: ‘ಮಹದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ಜಾರಿ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುತ್ತೇವೆ. ಪರಿಸರ ಇಲಾಖೆ ಅನುಮೋದನೆ ನೀಡಿದರೆ ಕಾಮಗಾರಿ ಆರಂಭಿಸುತ್ತೇವೆ’ ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಯವರು ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವರು. ಮಹದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ನಿಟ್ಟಿನಲ್ಲಿ ದೆಹಲಿಗೆ ನಿಯೋಗ ತೆರಳುವ ಕುರಿತು ನಿರ್ಧಾರ ಕೈಗೊಳ್ಳುವರು’ ಎಂದು ಪ್ರತಿಕ್ರಿಯಿಸಿದರು.
‘ಮಹದಾಯಿ ಮತ್ತು ಕಳಸಾ–ಬಂಡೂರಿ ಯೋಜನೆ ನಿಟ್ಟಿನಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸಿಲ್ಲ.ಗೋವಾ, ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದ್ದರೂ ಸಮಸ್ಯೆ ಪರಿಹರಿಸಲು ಕ್ರಮವಹಿಸಿಲ್ಲ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.