ಧಾರವಾಡ: ‘ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವರ ಸಭೆ ನಡೆಸಿ ಚರ್ಚಿಸಿದ್ದಾರೆ. ನಾವೆಲ್ಲರೂ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ, ಹೈಕಮಾಂಡ್ ಇನ್ನೊಂದು ದಿನದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ’ ಎಂದು ಸಚಿವ ಸಂತೋಷ್ ಎಸ್.ಲಾಡ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಅಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೈಕಮಾಂಡ್ ಜತೆ ಚರ್ಚಿಸಿ ಅವರೇ ಅಂತಿಮಗೊಳಿಸುತ್ತಾರೆ’ ಎಂದರು.
‘ಲೋಕಸಭೆ ಚುನಾವಣೆಯಲ್ಲಿ ಚನ್ನಪಟ್ಟಣ, ಶಿಗ್ಗಾವಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತ ಸಂದಿವೆ. ಸಂಡೂರು ಕ್ಷೇತ್ರದಲ್ಲಿ ಎರಡೂ ಬಾರಿ ಹೆಚ್ಚು ಮತ ಗಳಿಸಿದ್ದೇವೆ. ಹೀಗಾಗಿ, ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲ್ಲುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.