ಹುಬ್ಬಳ್ಳಿ: ‘ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‌ನಲ್ಲಿ ಶೇ 1 ಅಥವಾ ಶೇ 2ರಷ್ಷು ಹಣವನ್ನು ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕೆ ನೀಡಲು ಮುಖ್ಯಮಂತ್ರಿಯವರನ್ನು ಕೋರಲಾಗಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಇಲ್ಲಿ ಹೇಳಿದರು.
ಕಾರ್ಮಿಕ ಇಲಾಖೆ ಮಂಗಳವಾರ ಏರ್ಪಡಿಸಿದ್ದ, ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸೆಸ್ ಹಣ ನೀಡುವ ಪ್ರಸ್ತಾವ ಕಾರ್ಯರೂಪಕ್ಕೆ ಬಂದರೆ, ₹2 ಸಾವಿರ ಕೋಟಿ ಸಿಗುತ್ತದೆ’ ಎಂದರು.
‘ಕರ್ನಾಟಕದ ಜಿಎಸ್‌ಟಿ ಪಾಲಿನಲ್ಲಿ ಶೇ 0.01ರಷ್ಟು ಹಣ ನೀಡಲು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಅದರ ಮೊತ್ತ ₹1 ಸಾವಿರ ಕೋಟಿ ಆಗಲಿದೆ. ಈ ಎರಡೂ ಯೋಜನೆ ಜಾರಿಯಾದರೆ, ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಸೌಲಭ್ಯ ಸಿಗಲಿದೆ’ ಎಂದರು.
‘ರಾಜ್ಯದಲ್ಲಿ ಶೇ 90ರಷ್ಟು ಕಾರ್ಮಿಕರು ಅಸಂಘಟಿತರು. ಕಳೆದ ಎರಡು ವರ್ಷಗಳಲ್ಲಿ ಕಾರ್ಮಿಕ ಇಲಾಖೆಯಲ್ಲಿ 1.08 ಕೋಟಿ ಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 35 ಲಕ್ಷ ಮಂದಿ ಕಟ್ಟಡ ನಿರ್ಮಾಣ ಕಾರ್ಮಿಕರು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.