ಹುಬ್ಬಳ್ಳಿ: ‘ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್, ವಂಚನೆ ಮತ್ತು ಗೋಮಾಂಸ ಸಾಗಿಸುವ ಕಂಪನಿಗಳಿಂದ ಚಂದಾ ಎತ್ತುವ ಮೂಲಕ ಬಿಜೆಪಿಯನ್ನು ಕಟ್ಟಲಾಗಿದೆ’ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ಕುಂದಗೋಳದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಚುನಾವಣೆಗೂ ಮುನ್ನ ಬಿಜೆಪಿ ಮಾಡಿಕೊಂಡಿದ್ದ ಚುನಾವಣಾ ಬಾಂಡ್ ಹಣ ಮತ್ತು ಪ್ರಧಾನಮಂತ್ರಿ ಕೇರ್ ಹಣ ಎಲ್ಲಿ ಹೋಗಿದೆ ಎಂಬ ಬಗ್ಗೆ ಮಾಧ್ಯಮದಲ್ಲಿ ವಿಸ್ತೃತ ಚರ್ಚೆ ಆಗಬೇಕಿದೆ’ ಎಂದರು.
‘ದೇಶದಲ್ಲಿ ಕಳೆದ ಹನ್ನೊಂದು ವರ್ಷಗಳಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಇ.ಡಿ(ಜಾರಿ ನಿರ್ದೇಶನಾಲಯ) ದಾಳಿ ನಡೆದಿವೆ. ಅವುಗಳಲ್ಲಿ ಶೇ 99ರಷ್ಟು ದಾಳಿ ಬಿಜೆಪಿಯೇತರ ಸರ್ಕಾರ ಇರುವ ರಾಜ್ಯಗಳಲ್ಲಿ ಮತ್ತು ವಿರೋಧ ಪಕ್ಷಗಳ ನಾಯಕರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ. ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಿಜೆಪಿ ಮುಖಂಡರು ವಿರೋಧ ಪಕ್ಷಗಳನ್ನು ಬೆದರಿಸಲು ಬಳಸುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.