ಶಾಲೆ
(ಸಾಂಕೇತಿಕ ಚಿತ್ರ)
ಧಾರವಾಡ: ಶಾಲೆಗೆ ಗೈರು ಹಾಜರಾಗುವ ಮಕ್ಕಳ ಮನೆಗೆ ಭೇಟಿ ನೀಡಿ, ಮನವೊಲಿಸಿ ಶಾಲೆಗೆ ಹಾಜರಾಗಲು ತಿಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 1ರಿಂದ 10ನೇ ತರಗತಿಯವರೆಗೆ 3.39 ಲಕ್ಷ ವಿದ್ಯಾರ್ಥಿಗಳು ಇದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ಪ್ರತಿದಿನ ಶಾಲೆಗೆ ಹಾಜರಾಗಿ ಶೈಕ್ಷಣಿಕ ಪ್ರಗತಿ ಸಾಧಿಸುವಂತೆ ಮಾಡಲು ಸಮುದಾಯಗಳ ಸಹಕಾರ ಅಗತ್ಯ ಇದೆ. ಪೋಷಕರು ಮತ್ತು ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಲು ಕಾರ್ಯತಂತ್ರಗಳನ್ನು ರೂಪಿಸಬೇಕು. ಜಿಲ್ಲೆಯಲ್ಲಿ ಎಸ್ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕು’ ಎಂದರು.
ಪೌಷ್ಟಿಕ ಆಹಾರದ ಕೊರತೆ ಮತ್ತು ಆರೋಗ್ಯ ಸಮಸ್ಯೆಗಳು ಇದ್ದಲ್ಲಿ ಮಾಹಿತಿ ಪಡೆಯಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಅವರ ಕಲಿಕಗೆ ಒತ್ತು ನೀಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಶುಭ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.