ADVERTISEMENT

ಹುಬ್ಬಳ್ಳಿ | ಪೂರ್ಣಗೊಳ್ಳದ ಸಮೀಕ್ಷೆ: ಅ. 8ರಿಂದ ಬೆಳಿಗ್ಗೆ 8ರಿಂದ ಶಾಲೆ ಆರಂಭ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 16:59 IST
Last Updated 6 ಅಕ್ಟೋಬರ್ 2025, 16:59 IST
ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ
ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ   

ಹುಬ್ಬಳ್ಳಿ: ‘ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಹಾಗೂ ಸಮೀಕ್ಷೆಗೆ ಶಿಕ್ಷಕರನ್ನು ನಿಯೋಜನೆ ಮಾಡಿರುವುದರಿಂದ ಅ.8ರಿಂದ 12ರವರೆಗೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 1ರವರೆಗೆ ತರಗತಿ ನಡೆಸಲು ಸೂಚಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಇಲಾಖೆ ಧಾರವಾಡ ವಿಭಾಗದ ಆಯುಕ್ತ ಈಶ್ವರ ಉಳ್ಳಾಗಡ್ಡಿ ತಿಳಿಸಿದರು.

‘ಅ.7ರಂದು ದಸರಾ ರಜೆ ಮುಕ್ತಾಯವಾಗಿ ಅ. 8ರಂದು ಶಾಲೆಗಳು ಪುನರಾರಂಭವಾಗಲಿವೆ. ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವುದರಿಂದ, ಮಕ್ಕಳ ಕಲಿಕೆಗೆ ಸಮಸ್ಯೆಯಾಗಬಾರದು ಎಂದು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು.

‘ಸಮೀಕ್ಷೆಗೆ ನಿಯೋಜನೆಯಾದ ಶಿಕ್ಷಕರು ಶಾಲಾ ಅವಧಿ ಮುಗಿಸಿ, ಮಧ್ಯಾಹ್ನದ ನಂತರ ಸಮೀಕ್ಷೆಗೆ ತೆರಳಬೇಕು. ಸರ್ಕಾರದ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಇದು ಧಾರವಾಡ ವಿಭಾಗದ ಒಂಬತ್ತು ಶೈಕ್ಷಣಿಕ ಜಿಲ್ಲೆಗಳಿಗೂ ಅನ್ವಯಿಸುತ್ತದೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.