ADVERTISEMENT

ದೇಶದ್ರೋಹ ಪ್ರಕರಣ: ಆರೋಪಿಗಳಿಗೆ ಜಾಮೀನು ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 11:27 IST
Last Updated 9 ಮಾರ್ಚ್ 2020, 11:27 IST

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಇಲ್ಲಿನ ಐದನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ಸೋಮವಾರ ಜಾಮೀನು ತಿರಸ್ಕರಿಸಿದೆ.

ಪ್ರಕರಣದ ತನಿಖೆ ಆರಂಭದ ಹಂತದಲ್ಲಿದೆ. ಈ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡುವುದು ಸಮಂಜಸವಲ್ಲ ಎನ್ನುವ ಕಾರಣಕ್ಕೆ ನ್ಯಾಯಾಧೀಶ ಕೆ.ಎನ್‌. ಗಂಗಾಧರ ಜಾಮೀನು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳ ಪರ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ವಿಚಾರಣೆ ಮಾ. 5ರಂದು ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT