ADVERTISEMENT

‘ಏಪ್ರಿಲ್‌ನಲ್ಲಿ ಹಿರಿಯ ನಾಗರಿಕರ ಸಮಾವೇಶ’

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2022, 3:02 IST
Last Updated 2 ಮಾರ್ಚ್ 2022, 3:02 IST

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಏಪ್ರಿಲ್‌ನಲ್ಲಿ ಹಿರಿಯ ನಾಗರಿಕರ ಮತ್ತು ನಿವೃತ್ತ ನೌಕರರ ರಾಜ್ಯ ಮಟ್ಟದ ಸಮಾವೇಶವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಬಿ.ಎ. ಪಾಟೀಲ ಹೇಳಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟನೆಗೆ ಬರಲು‌ ಒಪ್ಪಿಕೊಂಡಿದ್ದು, ಸದ್ಯದಲ್ಲೇ ದಿನಾಂಕ ನಿಗದಿಪಡಿಸಲಾಗುವುದು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ,ಎ. ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ‌‌ ಮುನೇನಕೊಪ್ಪ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಪೊಲೀಸ್ ಠಾಣೆಗಳಲ್ಲಿ ಹಿರಿಯ ನಾಗರಿಕರ ದೂರುಗಳಿಗೆ ಸಂಬಂಧಿಸಿದ ಪ್ರತ್ಯೇಕ ವಿಭಾಗ, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಚಿಕಿತ್ಸಾ ವಿಭಾಗ ಆರಂಭ ಸೇರಿದಂತೆ ಕಾನೂನುಬದ್ಧವಾಗಿ ಹಲವು ಸೌಲಭ್ಯಗಳು ಸಿಗಬೇಕಿವೆ. ಹಲವು ಬೇಡಿಕೆಗಳನ್ನು ‌ಈಡೇರಿಸುವಂತೆ ಸಂಘದಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ.‌ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಸುಪ್ರೀಂಕೋರ್ಟ್‌ಗೆ ‌ಸಾರ್ವಜನಿಕ‌ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು‌’ ಎಂದರು.

ADVERTISEMENT

ಸಂಘದ ಪದಾಧಿಕಾರಿಗಳಾದ ಸುನಂದಾ ಬೆನ್ನೂರ, ಪಿ.ಪಿ. ಗಾಯಕವಾಡ, ಎಫ್.ಎ. ಶೇಖ, ಹೇಮಗಿರಿ ಪಟ್ಟಣಶೆಟ್ಟಿ, ಪಿ.ವಿ. ಹಿರೇಮಠ, ಎ.ಎಫ್. ರೇಶ್ಮಿ ಹಾಗೂ ರಾಜಕುಮಾರ ಕಾಮರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.