
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಹುಬ್ಬಳ್ಳಿ: ಇಲ್ಲಿನ ಮಂಜುನಾಥ ನಗರದ ಚೇತನಾ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಫೆ.15ರಂದು ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ಬೆಳಿಗ್ಗೆ 6.30, ಮಧ್ಯಾಹ್ನ 1 ಹಾಗೂ ರಾತ್ರಿ 11 ಗಂಟೆಗೆ ರುದ್ರಾಭಿಷೇಕ ಆಯೋಜಿಸಲಾಗಿದೆ. ಸಂಜೆ 6 ಗಂಟೆಯಿಂದ ಬಡಾವಣೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಬಳಿಕ ವೆಂಕಟೇಶ ಜೋಶಿ ಅವರಿಂದ ಭಕ್ತಿ ಸಂಗೀತ ಗಾಯನ ಜರುಗಲಿದೆ’ ಎಂದು ದೇವಸ್ಥಾನದ ಭಕ್ತಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.