ADVERTISEMENT

ಶೂಟಿಂಗ್‌: ಹುಬ್ಬಳ್ಳಿ ಶೂಟರ್‌ಗಳಿಗೆ 18 ಪದಕ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 17:09 IST
Last Updated 5 ಮಾರ್ಚ್ 2021, 17:09 IST
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶೂಟಿಂಗ್‌ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಪದಕ ಗೆದ್ದ ಹುಬ್ಬಳ್ಳಿ ಸ್ಪೋರ್ಟ್ಸ್‌ ಶೂಟಿಂಗ್‌ ಅಕಾಡೆಮಿ ಶೂಟರ್‌ಗಳು
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶೂಟಿಂಗ್‌ ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಪದಕ ಗೆದ್ದ ಹುಬ್ಬಳ್ಳಿ ಸ್ಪೋರ್ಟ್ಸ್‌ ಶೂಟಿಂಗ್‌ ಅಕಾಡೆಮಿ ಶೂಟರ್‌ಗಳು   

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಶೂಟಿಂಗ್‌ ಕ್ರೀಡಾಕೂಟದಲ್ಲಿ ಹುಬ್ಬಳ್ಳಿ ಸ್ಪೋರ್ಟ್ಸ್‌ ಶೂಟಿಂಗ್‌ ಅಕಾಡೆಮಿಯ ಶೂಟರ್‌ಗಳು 9 ಚಿನ್ನ, ಮೂರು ಬೆಳ್ಳಿ ಮತ್ತು ಆರು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಯಲಹಂಕದಲ್ಲಿ ಪ್ರಕಾಶ ಪಡುಕೋಣೆ–ರಾಹುಲ್‌ ದ್ರಾವಿಡ್ ಕ್ರೀಡಾಂಗಣದಲ್ಲಿ ನಡೆದಿದ್ದ ಟೂರ್ನಿಯಲ್ಲಿ ಇಲ್ಲಿನ 65 ಶೂಟರ್‌ಗಳು ಪಾಲ್ಗೊಂಡಿದ್ದರು. ವಿನುತಾ ಲಕಮನಹಳ್ಳಿ ಅತ್ಯುತ್ತಮ ಸಾಧನೆ ತೋರಿ ವೈಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಪಡೆದರು. ಜೇಫರ್ ಅರಳಿ ಮೂರು ಚಿನ್ನ, ತಂಡ ವಿಭಾಗದಲ್ಲಿ ಮೂರು ಪ್ರಶಸ್ತಿಗಳನ್ನು ಪಡೆದಿದೆ.

ಚೆನ್ನೈನಲ್ಲಿ ನಡೆಯಲಿರುವ ದಕ್ಷಿಣ ಲವಯ ಮಟ್ಟದ ಶೂಟಿಂಗ್‌ ಕ್ರೀಡಾಕೂಟಕ್ಕೆ ಇಲ್ಲಿನ ಅಕಾಡೆಮಿಯ 33 ಶೂಟರ್‌ಗಳು ಅರ್ಹತೆ ಪಡೆದುಕೊಂಡಿದ್ದಾರೆ. ಮಕ್ಕಳ ಸಾಧನೆಗೆ ಅಕಾಡೆಮಿ ಸಂಸ್ಥಾಪಕ ಶಿವಾನಂದ ಬಾಲೆಹೊಸೂರು ಹಾಗೂ ಕೋಚ್‌ ರವಿಚಂದ್ರ ಬಾಲೆಹೊಸೂರು ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.