ADVERTISEMENT

ರಾಜ್ಯದಲ್ಲಿ ಆರ್‌ಎಸ್‌ಎಸ್ ಪ್ರಾಯೋಜಿತ ಸರ್ಕಾರ: ಸಿದ್ದರಾಮಯ್ಯ ಟೀಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 14:08 IST
Last Updated 17 ಜೂನ್ 2022, 14:08 IST
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ – ಪ್ರಜಾವಾಣಿ
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ – ಪ್ರಜಾವಾಣಿ   

ಹುಬ್ಬಳ್ಳಿ: ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರಲು, ಜಾರಿ ನಿರ್ದೇಶನಾಲಯ (ಇ.ಡಿ) ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.

ADVERTISEMENT

ಅಗ್ನಿಪಥ ಯೋಜನೆ ವಿರುದ್ಧ ಯುವಕರು ಆಕ್ರೋಶಗೊಂಡಿದ್ದಾರೆ. ಹಿಂದಿನ ಪದ್ದತಿಯನ್ನೇ ಮುಂದುವರಿಸಬೇಕು, ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಬಿಜೆಪಿ ಕೇಸರೀಕರಣ ಮಾಡಲು ಹೊರಟಿದೆ. ಆ ಮೂಲಕ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ. ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು. ರಾಜ್ಯದಲ್ಲಿರುವುದು ಆರ್‌ಎಸ್‌ಎಸ್ ಪ್ರಾಯೋಜಿತ ಸರ್ಕಾರ ಹೀಗಾಗಿ ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ. ಅದೇ ಕಾಂಗ್ರೆಸ್ಸಿಗರು ಮಾಡಿದರೆ ಕೇಸ್ ಹಾಕಿ ಪಕ್ಷಪಾತ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.