ಹುಬ್ಬಳ್ಳಿ: ಇಲ್ಲಿನ ಸಿದ್ಧಾರೂಢರ ಮಠದಲ್ಲಿ ಪ್ರವಚನ, ಸಂಗಿತೋತ್ಸವದೊಂದಿಗೆ ಮಾರ್ಚ್ 2 ರಂದು ನಡೆಯಲಿರುವ ಸದ್ಗುರು ಸಿದ್ಧಾರೂಢರ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಗಳಿಗೆ ಚಾಲನೆ ಸಿಕ್ಕಿದೆ.
ಜಾತ್ರೆಯವರೆಗೂ ನಿತ್ಯ ಸಂಜೆ ಪ್ರವಚನ, ಸಂಗೀತ ಕಾರ್ಯಕ್ರಮಗಳು ನಡೆಯಲಿವೆ. ಮಾ.1 ರಂದು ಮಹಾಶಿವರಾತ್ರಿ ಜಾಗರಣೆ ನಿಮಿತ್ತ ಪಲ್ಲಕ್ಕಿ ಉತ್ಸವ ಜಡಿಸ್ವಾಮಿ ಮಠಕ್ಕೆ ಹೋಗಿ, ಮರಳಿ ಮಠಕ್ಕೆ ಬರುವುದು.
ಮಾ.2 ರಂದು ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಸಂಜೆ 5.30ಕ್ಕೆ ರಥೋತ್ಸವ ನಡೆಯಲಿದೆ. ಮಹಾರಾಷ್ಟ್ರ, ಗೋವಾ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.