ಹುಬ್ಬಳ್ಳಿ: ಸಿದ್ಧಾರೂಢರ ಜಲ ರಥೋತ್ಸವ (ತೆಪ್ಪದ ತೇರು) ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಪ್ರಾರಂಭವಾಗಿದೆ.
ರಥದಲ್ಲಿ ಸಿದ್ಧಾರೂಢರ ಹಾಗೂ ಗುರುನಾಥ ರೂಢರ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದ್ದು, ಕೆಲವೇ ಕ್ಷಣಗಳಲ್ಲಿ ರಥೋತ್ಸವಕ್ಕೆ ಚಾಲನೆ ಸಿಗಲಿದೆ.
ರಥವನ್ನು ಹೊತ್ತಿರುವ ದೋಣಿ ಪುಷ್ಕರಣಿಯಲ್ಲಿ ಸಾಗಲಿದೆ. ವಿಶಾಲ ಪುಷ್ಕರಣಿಯ ಸುತ್ತಲೂ ಜನರು ಕಿಕ್ಕಿರಿದು ತುಂಬಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.