ಧಾರವಾಡ: 'ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಮತ್ತು ಪ್ರಕರಣದ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ಆಗಬೇಕು ಎಂದು ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಏಪ್ರಿಲ್ 22ರಂದು ಮೌನ ಮೆರವಣಿಗೆ ನಡೆಸಲಾಗುವುದು. ಸ್ವಯಂ ಸಮುದಾಯದವರು (ಮುಸ್ಲಿಂ) ಮಾಡುವುದಾಗಿ ತಿಳಿಸಿದ್ಧಾರೆ’ ಎಂದು ಧಾರವಾಡ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ತಿಳಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೇಹಾ ಕೊಲೆ ಅಮಾನವೀಯ ಕೃತ್ಯ. ಇಂಥ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.