ಹುಬ್ಬಳ್ಳಿ: ‘ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣದ ಮಾಡಿದ ರೀತಿ ತುಮಕೂರನ್ನು ಬೆಂಗಳೂರಿನಲ್ಲಿ ಸೇರಿಸುವ ಚಿಂತನೆ ಒಪ್ಪಲಾಗದು. ತುಮಕೂರಿಗೆ ಅದರದ್ದೇ ಆದ ಇತಿಹಾಸವಿದೆ. ಜನರನ್ನು ಅನಗತ್ಯವಾಗಿ ದಾರಿ ತಪ್ಪಿಸುವ ಕೆಲಸ ನಡೆದಿದೆ’ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಒಗ್ಗಟ್ಟು ಇಲ್ಲ ಎಂಬುದು ರಾಜ್ಯದ ಆಡಳಿತ ವೈಖರಿಯಲ್ಲಿ ಗೊತ್ತಾಗುತ್ತಿದೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತಕ್ಕೆ ಶೂನ್ಯ ಅಂಕ ಕೊಡುವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ನೋಡಿದಂತಹ ಸಿದ್ದರಾಮಯ್ಯ ಈಗಿಲ್ಲ. ಬದಲಾಗಿದ್ದಾರೆ. ಅವರೇ ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಅವರ ಕಾರ್ಯವೈಖರಿ ಶ್ಲಾಘಿಸುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.