ADVERTISEMENT

ವಿಡಿಯೊ: ಗೋವಾದಲ್ಲಿ ಸೈಕಲ್ ಹೊಡೆಯುತ್ತಿರುವ ‌ಸೋನಿಯಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 3:57 IST
Last Updated 26 ನವೆಂಬರ್ 2020, 3:57 IST
ಸೈಕಲ್ ಹೊಡೆಯುತ್ತಿರುವ ‌ಸೋನಿಯಾ ಗಾಂಧಿ
ಸೈಕಲ್ ಹೊಡೆಯುತ್ತಿರುವ ‌ಸೋನಿಯಾ ಗಾಂಧಿ   

ಹುಬ್ಬಳ್ಳಿ: ಅನಾರೋಗ್ಯ ಕಾರಣದಿಂದ ಗೋವಾಕ್ಕೆ ವಿಶ್ರಾಂತಿ ಪಡೆಯಲು ತೆರಳಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಕಲ್ ಹೊಡೆಯುತ್ತಿರುವ‌‌ ವಿಡಿಯೊ ವಾಟ್ಟ್‌ಆ್ಯಪ್‌ನಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಯುವ ಮುಖಂಡರೊಬ್ಬರು ಈ ವಿಡಿಯೊ ಹಂಚಿಕೊಂಡಿದ್ದು, ಬಹುತೇಕ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಕಾರಣ, ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿಯವರಿಗೆ ದೆಹಲಿ ತೊರೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಸೋನಿಯಾ ಗಾಂಧಿ ಅವರು ಗೋವಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ADVERTISEMENT

‘ಕಳೆದ ಆಗಸ್ಟ್‌ನಲ್ಲಿ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ದೆಹಲಿಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯ, ಸೋನಿಯಾ ಅವರಲ್ಲಿರುವ ಅಸ್ತಮಾ ಮತ್ತು ಎದೆಯ ಸೋಂಕಿನ ತೀವ್ರತೆ ಹೆಚ್ಚಿಸುವ ಸಾಧ್ಯತೆ ಇರುವುದರಿಂದ, ವೈದ್ಯರು ಅವರನ್ನು ದೆಹಲಿಯಿಂದ ಬೇರೆಡೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಗೋವಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.