ಹುಬ್ಬಳ್ಳಿ: ಧಾರಾಕಾರ ಮಳೆಯಿಂದ ಶ್ರೀವಗಿಲು–ಯೆದಕುಮಾರಿ–ಕಡಗರಬಳ್ಳಿ–ದೊನಿಗಲ್ ವಿಭಾಗದಲ್ಲಿ ಶನಿವಾರ ಭೂಕುಸಿತ ಸಂಭವಿಸಿದ್ದರಿಂದ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಯಿತು.
ಶನಿವಾರ ಸಂಚಾರ ಆರಂಭಿಸಿದ ಮಂಗಳೂರು ಸೆಂಟ್ರಲ್–ವಿಜಯಪುರ ಸ್ಪೆಷಲ್ ಎಕ್ಸ್‌ಪ್ರೆಸ್ (07378), ಮುರುಡೇಶ್ವರ–ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ (16586), ಕಾರವಾರ–ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ (16596) ರೈಲು ಕೆಲವು ಮಾರ್ಗಗಳಲ್ಲಿ ನಿಲುಗಡೆ ಆಗದೆ, ಬೇರೆ ಮಾರ್ಗದಲ್ಲಿ ಸಂಚರಿಸಿದವು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.