ADVERTISEMENT

ಬೇಸಿಗೆ ರಜೆಯಲ್ಲಿ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2025, 15:55 IST
Last Updated 17 ಏಪ್ರಿಲ್ 2025, 15:55 IST
   

ಹುಬ್ಬಳ್ಳಿ: ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸುವ ಉದ್ದೇಶದಿಂದ ಬೆಳಗಾವಿ ಮತ್ತು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ನಿರ್ಧರಿಸಿದೆ.

ಏಪ್ರಿಲ್ 20ರಂದು ಬೆಳಗಾವಿ– ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ (07385) ರೈಲು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಮುಂಜಾನೆ 5 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ತಲುಪಲಿದೆ. 21ರಂದು ಎಸ್ಎಂವಿಟಿ ಬೆಂಗಳೂರು–ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ (07386) ರೈಲು ಬೆಂಗಳೂರಿನಿಂದ ರಾತ್ರಿ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿ ತಲುಪಲಿದೆ.

ಎರಡೂ ಮಾರ್ಗಗಳಲ್ಲಿ ಖಾನಾಪುರ, ಲೋಂಡ, ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹಾವೇರಿ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.