ಹುಬ್ಬಳ್ಳಿ: ನೈರುತ್ಯ ರೈಲ್ವೆಯ ನೂತನ ಪ್ರಧಾನ ವ್ಯವಸ್ಥಾಪಕರಾಗಿ (ಜಿಎಂ) ಸಂಜೀವ್ ಕಿಶೋರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಇದೇ ವರ್ಷದ ಮಾರ್ಚ್‌ನಲ್ಲಿ ಅಜಯಕುಮಾರ್ ಸಿಂಗ್ ಸೇವಾ ನಿವೃತ್ತಿಯಾದ ಬಳಿಕ ದಕ್ಷಿಣ ಮಧ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಗಜಾನನ ಮಲ್ಯ ಹೆಚ್ಚುವರಿಯಾಗಿ ನೈರುತ್ಯ ರೈಲ್ವೆ ಜವಾಬ್ದಾರಿ ವಹಿಸಿಕೊಂಡಿದ್ದರು.
ಸಂಜೀವ್ ನವದೆಹಲಿ, ರೈಲ್ವೆ ಮಂಡಳಿ, ಯಲಹಂಕದ ರೈಲು ಗಾಲಿ ಕಾರ್ಖಾನೆ ಸೇರಿದಂತೆ ಹಲವೆಡೆ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಅಂತರರಾಷ್ಟ್ರೀಯ ಯೋಜನೆಗಳ ಬಗ್ಗೆ ಉತ್ತಮ ಮಾಹಿತಿ ಹೊಂದಿದ್ದಾರೆ. ಉತ್ತಮ ಕಾರ್ಯ ನಿರ್ವಹಣೆಗೆ 2003ರಲ್ಲಿ ಕೇಂದ್ರ ರೈಲ್ವೆ ಸಚಿವಾಲಯದಿಂದ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.