ಹುಬ್ಬಳ್ಳಿ: ಸಮೀಪದ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಆಯೋಜಿಸಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪಾರ್ಶ್ವನಾಥರ ಮೂರ್ತಿಗೆ ಮಹಾಮಸ್ತಕಾಭಿಷೇಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶ್ವಶಾಂತಿಗಾಗಿ ಜೈನ ಧರ್ಮದ ತತ್ವ ಪಾಲಿಸಬೇಕಿದೆ. ತೀರ್ಥಂಕರರ ತತ್ವಗಳು ಸಾರ್ವಕಾಲಿಕವಾಗಿವೆ ಎಂದರು.
ಕುಂತುಸಾಗರ ಮಹಾರಾಜರು, ಗುಣಧರನಂದಿ ಮಹಾರಾಜರು, ಸುರೇಂದ್ರ ಹೆಗ್ಗಡೆ ಸೇರಿದಂತೆ ಹಲವು ಆಚಾರ್ಯರು ಇದ್ದರು.
ನಂತರ, 61 ಅಡಿ ಎತ್ತರದ ಪಾರ್ಶ್ವನಾಥರ ಪ್ರತಿಮೆಗೆ ಹೆಲಿಕ್ಯಾಪ್ಟರ್ ಮೂಲಕ ಪುಷ್ಪವೃಷ್ಟಿ, ಮಂತ್ರಘೋಷದೊಂದಿಗೆ ವಿವಿಧ ಅಭಿಷೇಕ ಜರುಗಿತು. ಉರಿಬಿಸಿಲನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಮಹಾಮಸ್ತಕಾಭಿಷೇಕ ಕಣ್ತುಂಬಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.